ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಸರ್ಕಾರದ ವಿರುದ್ಧ ಮತ್ತೆ ಸಿಎಂ ರಾಜಕೀಯ ಸಲಹೆಗಾರ ಹಾಗೂ ಶಾಸಕ ಬಿಆರ್ ಪಾಟೀಲ್ ರೆಬಲ್ ಆಗಿದ್ದಾರೆ. ಕಲಬುರಗಿಯಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳುತ್ತಿಲ್ಲ. ಜನರ ಸಮಸ್ಯೆಗಳಿಗೆ ಯಾವೊಬ್ಬ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಮೂಲಭೂತ ಸಮಸ್ಯೆಗಳು ಸಾಕಷ್ಟು ಕಾಡುತ್ತಿವೆ. ಪ್ರಮುಖವಾಗಿ ಕಲಬುರಗಿಯಲ್ಲಿ ಕುಡಿಯುವ ಶುದ್ಧ ನೀರು ಸಿಗುತ್ತಿಲ್ಲ. ಜನರಿಗೆ ಕಲುಷಿತ ಕುಡಿಯುವ ನೀರು ಸರಬರಾಜು ಮಾಡಲಾಗ್ತಿದೆ. ಈ ಬಗ್ಗೆ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗ್ತಿಲ್ಲ. ಪಾಲಿಕೆ ಆಯುಕ್ತರು, ಜಿ ಪಂ ಸಿಇಓ ಜನರ ಸಮಸ್ಯೆಗಳಿಗೆ ಕ್ಯಾರೇ ಎನ್ನುತ್ತಿಲ್ಲ. ಅಧಿಕಾರಿಗಳ ವರ್ತನೆಯಿಂದ ಸರ್ಕಾರಕ್ಕೆ ಕೆಟ್ಟ. ಸರ್ಕಾರ ಈ ಕುರಿತು ಕ್ರಮ ಜರುಗಿಸಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.