ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ: ಸೆ.09ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್​

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ: ಸೆ.09ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್​

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಇದೀಗ ಮತ್ತೆ ಮುಂದೂಡಿಕೆ ಮಾಡಿದ್ದು, ಸೆ.​ 09ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಶನಿವಾರ (ಆ.31) ಸುದೀರ್ಘ ವಿಚಾರಣೆಯ ಬಳಿಕ ಅರ್ಜಿ ವಿಚಾರಣೆಯನ್ನು ಕೋರ್ಟ್​​ ಸೆಪ್ಟಂಬರ್​ 02ಕ್ಕೆ ಮುಂದೂಡಿತು. ಅದರಂತೆಯೇ ಇಂದು ಮಧ್ಯಾಹ್ನ 2:30ಕ್ಕೆ ವಿಚಾರಣೆ ಆರಂಭಿಸಿದ ನ್ಯಾಯಾಲಯ, ಸಿಎಂ ಮತ್ತು ರಾಜ್ಯಪಾಲರ ವಕೀಲರ ವಾದ-ಪ್ರತಿವಾದ ಆಲಿಸಿ ಇದೀಗ ವಿಚಾರಣೆಯನ್ನು ಮತ್ತೆ ಮುಂದೂಡಿತು. ಈ ವಾರದಲ್ಲಿ ಗೌರಿ-ಗಣೇಶ ಹಬ್ಬ ಹಾಗೂ ಸರಣಿ ರಜೆಗಳ ಹಿನ್ನಲೆ ವಿಚಾರಣೆಯನ್ನು ಸೆ.09ಕ್ಕೆ ಮುಂದೂಡಿಕೆ ಮಾಡಲಾಗಿದೆ.

ವರದಿ : ಹಣಮಂತ ದೇಶಮುಖ ,ಮುಖ್ಯ ವರದಿಗಾರರು

Share this post

Post Comment