ಅನುಭವ ಮಂಟಪ ಕಾಮಗಾರಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲು ಸಿಎಂ ಸಿದ್ದರಾಮಯ್ಯಗೆ ಮನವಿ

ಅನುಭವ ಮಂಟಪ ಕಾಮಗಾರಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲು ಸಿಎಂ ಸಿದ್ದರಾಮಯ್ಯಗೆ  ಮನವಿ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ: ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಡಾ ಬಸವಲಿಂಗ ಪಟ್ಟದ್ದೇವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ  ನೇತೃತ್ವದಲ್ಲಿ ಸಿ ಎಂ ಸಿದ್ದರಾಮಯ್ಯ  ಅವರಿಗೆ ಅನುಭವ ಮಂಟಪ ಕಾಮಗಾರಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು.

ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು  ಮನವಿ ಪತ್ರ ಸ್ವೀಕರಿಸಿ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ಸಭೆ ಶೀಘ್ರದಲ್ಲೇ ಕರೆಯುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಶಿವಾನಂದ ದೇವರು,ಅಕ್ಕ ಗಂಗಾಬಿಕಾ  ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ, ಸಚಿವರಾದ ಶರಣಪ್ರಕಾಶ್ ಪಾಟೀಲ್,ಎಂ.ಬಿ. ಪಾಟೀಲ್ ಲಕ್ಷ್ಮಿ ಹೆಬ್ಬಾಳಕರ, ಸಂಸದರಾದ ಸಾಗರ್ ಖಂಡ್ರೆ,ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಡಾ. ದುರ್ಗೆ , ವೈಜಿನಾಥ ಕಾಮಶೆಟ್ಟಿ ಹಾಗೂ ಇತರರಿದ್ದರು.

Share this post

Post Comment