ಹಿಂದು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆ ಗಣೇಶ ಮೂರ್ತಿ ಮೇಲೆ ಚಪ್ಪಲಿ ತೂರಾಟ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಅವರು ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೋಸ್ಟ್‌ನಲ್ಲಿ ಆರ್.ಅಶೋಕ ಅವರು, ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಸಹಿಸಲು ಸಾಧ್ಯವಿಲ್ಲದ್ದು. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಶೇರ ಮಾಡಿರುವ ಅವರು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಮಂಡ್ಯದಲ್ಲಿ ಹಿಂದು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆ ನಡೆದಿದೆ. ಹಿಂದೂ ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲೆಸೆದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗಣೇಶ ಮೂರ್ತಿ ಮೇಲೆ ಕಲ್ಲು, ಚಪ್ಪಲಿ ತೂರಾಡಿದ್ದಾರೆ. ಇದರಿಂದ ನಾಗಮಂಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರು.