ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈನ ಬಾಂದ್ರಾ ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ಗಢದ ರಾಯ್ಪುರದ ಫೈಜಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಬೆದರಿಕೆ ಬಂದಿದೆ
ಶಾರುಖ್ ಖಾನ್ ತಂಡವು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.ಶಾರುಖ್ ಖಾನ್ ಅವರ ನಿರ್ಮಾಣ ಕಂಪನಿ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ಗೆ ಕರೆ ಬಂದಿದೆ.ಈ ಹಿಂದೆ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಅನೇಕ ಕೊಲೆ ಬೆದರಿಕೆಗಳು ಬಂದಿದ್ದವು.