ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್ ಗೆ ಶಿಖರ್ ಧವನ್ ನಿವೃತ್ತಿ ಘೋಷಣೆ

ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್ ಗೆ  ಶಿಖರ್ ಧವನ್ ನಿವೃತ್ತಿ ಘೋಷಣೆ

ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ದೇಶೀಯ, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ. ನಾನು ನನ್ನ ಕ್ರಿಕೆಟ್ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ.

ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ. ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ಜೈ ಹಿಂದ್! ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡಿದ್ದ ಧವನ್, ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ನನ್ನ ದೇಶಕ್ಕಾಗಿ ನಾನು ಸಾಕಷ್ಟು ಆಡಿದ್ದೇನೆ ಎಂಬ ತೃಪ್ತಿ ನನಗಿದೆ. ನನಗೆ ಈ ಅವಕಾಶವನ್ನು ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

Share this post

Post Comment