ಶಿಕ್ಷಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು: ಮಧು ಬಂಗಾರಪ್ಪ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಶಾಲೆಗೆ ವಿದ್ಯಾರ್ಥಿಗಳು ಚಕ್ಕರ್ ಹಾಕುವುದು ಸಹಜ. ಆದರೆ ಕೆಲವು ಕಡೆ ಶಿಕ್ಷಕರು ಶಾಲೆಗಳಿಗೆ ಬಾರದೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಶಿಕ್ಷಕರಾದವರು ಪಾಠ ಮಾಡಬೇಕು. ಮಕ್ಕಳಿಗೆ ಸರಿಯಾದ ದಾರಿ ತೋರಿಸಬೇಕು. ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ ಹೇಗೆ? ಅಂತಹ ಶಿಕ್ಷಕರಿಂದ ವಿದ್ಯಾರ್ಥಿಗಳು ಏನನ್ನು ಕಲಿಯಲು ಸಾಧ್ಯ. ಆದ್ದರಿಂದ ಆ ರೀತಿಯ ಶಿಕ್ಷಕರ ವಿರುದ್ಧ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಶಿಕ್ಷಕರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆ. ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ಚಕ್ಕರ ಹಾಕುವ ಶಿಕ್ಷಕರಿಂದ ಮಕ್ಕಳಿಗೆ ಬಹಳ ತೊಂದರೆಯಾಗುತ್ತದೆ. ಶಾಲೆಗೆ ಸರಿಯಾಗಿ ಬಂದು ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕು ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರನ್ನು ಸಿಎಂ ಕುರ್ಚಿಯಿಂದ ಇಳಿಸೊಕೆ ಯಾರಿಂದಲೂ ಸಾಧ್ಯವಿಲ್ಲ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಅನ್ನೋದು ನಮ್ಮೆಲ್ಲರ ಆಸೆ. ಅವರು ಸಿಎಂ ಆಗಿ ಮುಂದುವರೆಯುತ್ತಾರೆ. ಆ ನಂಬಿಕೆ ನನಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.
ಹಾಗೆಯೇ ಕೋರ್ಟ್ ನಲ್ಲಿ ಅರವಿಂದ ಕ್ರೆಜಿವಾಲ್, ಮಮತಾ ಬ್ಯಾನರ್ಜಿಯ ಕೇಸ್ ಕೂಡ ಇದೆ, ಇವರಿಗೆ ಸಿದ್ದರಾಮಯ್ಯ ಅಷ್ಟೇ ಯಾಕೆ ಕಾಣ್ತಾರೆ ಎಂದು ಮಧು ಬಂಗರಾಪ್ಪ ಪ್ರಶ್ನೇ ಮಾಡಿದ್ದಾರೆ.
ನನ್ನ ತಂದೆಯವರು ಮುಖ್ಯಮಂತ್ರಿ ಇದ್ದಾಗ ಬೇಕಾದಷ್ಟು ಕೇಸ್ ಗಳನ್ನ ನೋಡಿದ್ದೇವೆ. ಇದರ ಬಗ್ಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ. ಸಿಎಂ ರೇಸ್ ನಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಿನವರು ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ. ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ ಎಂದು ಹೇಳಿದರು.