ತುಳಸಿ ವಿವಾಹದ ಕುರಿತ ಪೌರಾಣಿಕ ಕಥೆಯೇನು ?

ತುಳಸಿ ವಿವಾಹದ ಕುರಿತ  ಪೌರಾಣಿಕ  ಕಥೆಯೇನು  ?

ಹಿಂದೂ ಧರ್ಮದಲ್ಲಿ ತುಳಸಿ ವಿವಾಹಕ್ಕೆ ವಿಶೇಷ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಏಕಾದಶಿಯ ಮಾರನೇ ದಿನವಾದ ದ್ವಾದಶಿಯಂದು ಈ ತುಳಸಿ ವಿವಾಹ ಅಥವಾ ತುಳಸಿ ಪೂಜೆಯನ್ನು ಮಾಡುವ ಸಂಪ್ರದಾಯವಿದೆ.

ದಂತಕಥೆಯ ಪ್ರಕಾರ ವೃಂದಾ ಎಂಬ ಹೆಸರಿನ ಯುವತಿಯೇ ತುಳಸಿ ಗಿಡದ ರೂಪ ಪಡೆದಿರುವುದು. ವೃಂದಾ ಜಲಂಧರನೆಂಬ ದುಷ್ಟ ರಾಜನನ್ನು ಮದುವೆಯಾಗಿದ್ದಳು. ಈಕೆ ವಿಷ್ಣುವಿನ ಮಹಾನ್‌ ಭಕ್ತೆ ಮಾತ್ರವಲ್ಲದೆ ಮಹಾನ್‌ ಪತಿವ್ರತೆಯಾಗಿದ್ದಳು.

ಇದೇ ಕಾರಣಕ್ಕೆ ಮೂರು ಲೋಕಕ್ಕೂ ಉಪಟಳ ನೀಡುತ್ತಿದ್ದ ಜಲಂಧರನನ್ನು ಸೋಲಿಸುವುದು ದೇವಾನುದೇವತೆಗಳಿಗೆ ಅಸಾಧ್ಯವಾಗಿತ್ತು.

ಈ ಸಂದರ್ಭದಲ್ಲಿ ಶಿವನು ಏನು ಮಾಡುವುದೆಂದು ವಿಷ್ಣುವಿನ ಮೊರೆ ಹೋಗುತ್ತಾನೆ. ಆಗ ವಿಷ್ಣುವು ಜಲಂಧರ ರೂಪ ತಾಳಿ ವೃಂದಾಳ ಬಳಿಗೆ ಬಂದು ಮೋಹಿಸಿ ಆಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಾನೆ.

ಈ ಸಂಧರ್ಭದಲ್ಲಿ ಶಿವನು ಜಲಂಧರ ರಾಜನನ್ನು ಸಂಹರಿಸುತ್ತಾನೆ. ಇತ್ತ ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ವಿಷ್ಣುವಿಗೆ ವೃಂದಾ ಕಪ್ಪು ಕಲ್ಲಾಗಿ ಹೋಗು ಎಂದು ಶಾಪ ನೀಡುವುದಲ್ಲದೆ ತನ್ನ ಚಾರಿತ್ರ್ಯಕ್ಕೆ ಧಕ್ಕೆಯುಂಟಾದ್ದರಿಂದ ಪಾಪಕ್ಕೆ ಪ್ರಾಯಶ್ಚಿತವಾಗಿ ಸತಿ ಸಹಗಮನವಾದಳು.

ಅದೇ ಬೂದಿಯಿಂದ ತುಳಸಿ ಗಿಡ ಹುಟ್ಟಿತು. ವೃಂದಾಳ ಪತಿವ್ರತೆಕ್ಕೆ ಹಾನಿ ತಂದಿದ್ದನ್ನು ಸರಿಪಡಿಸಲು ವಿಷ್ಣುವು ತುಳಸಿಯನ್ನು ವಿವಾಹವಾದನು. ಅಂದಿನಿಂದ ಪ್ರತಿವರ್ಷ ಕಾರ್ತಿಕ ಮಾಸದ ಏಕಾದಶಿಯ ದಿನ ಸಾಲಿಗ್ರಾಮ ಹಾಗೂ ತುಳಸಿ ಗಿಡಕ್ಕೆ ವಿವಾಹ ನೆರವೇರಿಸುವ ಸಂಪ್ರದಾಯವನ್ನು ಪಾಲಿಸುತ್ತಾ ಬರಲಾಗುತ್ತಿದೆ.

Share this post

Post Comment