ನಾವು ಮಾಡಿರುವ ಕೆಲಸಗಳು ಶಾಶ್ವತವಾಗಿ ಇರುತ್ತೆ : ಡಿ.ಕೆ. ಶಿವಕುಮಾರ್

ನಾವು ಮಾಡಿರುವ ಕೆಲಸಗಳು ಶಾಶ್ವತವಾಗಿ ಇರುತ್ತೆ : ಡಿ.ಕೆ. ಶಿವಕುಮಾರ್

ಟೀಕೆಗಳು ಸಾಯುತ್ತವೆ, ನಾವು ಮಾಡಿರುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ಅನುಕೊಂಡಿದ್ದೇನೆ. ಈ ಯೋಜನೆ ಬಗ್ಗೆ ಟೀಕೆ ಮಾಡಿದವರಿಗೆ ಮಾಧ್ಯಮಗಳ ಕ್ಯಾಮೆರಾಗಳೇ ಉತ್ತರ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸಕಲೇಶಪುರದ ದೊಡ್ಡನಗರದ ಬಳಿ  ಮಾತನಾಡಿದ  ಶಿವಕುಮಾರ್ ಅವರು, ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಈ ಘಳಿಗೆಯಲ್ಲಿ ಒಂದು ವಿಶಿಷ್ಟ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ ಎಂದು ಹೇಳಿದರು.

ಆಲಮಟ್ಟಿ ಯೋಜನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಶಂಕುಸ್ಥಾಪನೆ ಮಾಡಿದ್ದರು. 2006ರಲ್ಲಿ ಅಬ್ದುಲ್ ಕಲಾಂ ಅವರು ಯೋಜನೆ ಉದ್ಘಾಟನೆ ಮಾಡಿದ್ದರು ಎಂದರು.

ಆಲಮಟ್ಟಿ ಯೋಜನೆ ಜಾರಿ ನಂತರ ಎತ್ತಿನಹೊಳೆ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಯಾಗಿದೆ. 2014 ಮಾರ್ಚ್ 5ರಂದು ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈಗ ಅವರ ನೇತೃತ್ವದಲ್ಲಿ ಈ ಯೋಜನೆ ಉದ್ಘಾಟನೆಯಾಗುತ್ತಿದೆ. 10 ವರ್ಷಗಳು ಕಳೆದಿದ್ದು ಹೋಗಿದೆ ಎಂದು ಹೇಳಿದರು.

ಹೋಮ ಹವನ ಮಾಡಲಾಗುವುದೇ ಎಂದು ಕೇಳಿದಾಗ, “ಹೋಮ ಹವನ ಮಾಡಬೇಕು, ಕುಂಬಳಕಾಯಿ ಬಲಿ ನೀಡಬೇಕು. ದೇವರಲ್ಲಿ ಪ್ರಾರ್ಥನೆ ಮಾಡಿ ಯೋಜನೆಗೆ ಚಾಲನೆ ನೀಡಬೇಕು. ನಮ್ಮ ಧರ್ಮ, ಸಂಸ್ಕೃತಿ ಕಾಪಾಡಬೇಕು. ಗಂಗೆ ಪೂಜೆ, ಬಾಗಿನ ಅರ್ಪಣೆ ಎಲ್ಲವೂ ನಮ್ಮ ಧರ್ಮ, ಸಂಸ್ಕೃತಿಯ ಭಾಗವಲ್ಲವೇ ಎಂದು ತಿಳಿಸಿದರು. ನನ್ನ ರಾಜಕೀಯ ಜೀವನದ ಒಂದು ಮೈಲಿಗಲ್ಲು. ಅತ್ಯಂತ ಹೆಮ್ಮೆಯ ಕ್ಷಣಗಳಲ್ಲಿ ಇದು ಒಂದು. ನನಗೆ ಇಂತಹ ಅವಕಾಶ ಕೊಟ್ಟ ಕನ್ನಡನಾಡಿನ ಜನರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

 

Share this post

Post Comment